ಬೆಳಗಾವಿ: ಲೋಕೋಪಯೋಗಿ ಇಲಾಖೆಯ ವತಿಯಿಂದ 2.75 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸೇತುವೆ ಕಾಮಗಾರಿಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ,ಜಾತ್ರಾಟ್ ಹಾಗೂ ಲಖನಾಪುರ ಗ್ರಾಮಸ್ಥರ ಹೀತದೃಷ್ಟಿಯಿಂದ ಈ ಗ್ರಾಮಗಳ ನಡುವೆ ಸೇತುವೆ ನಿರ್ಮಿಸಲು ಲೋಕೋಪಯೋಗಿ ಇಲಾಖೆಯ ವತಿಯಿಂದ 2.75 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ಮೂಲಕ ನಿಗದಿತ ಅವಧಿಯೊಳಗೆ ಈ ಸೇತುವೆ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಪ್ರಾದೇಶಿಕ ಸಂಪರ್ಕ ಹಾಗೂ ಅಭಿವೃದ್ಧಿಗೆ ವೇಗ ನೀಡುವ ಈ ಯೋಜನೆ, ಪ್ರಗತಿಯ ದಾರಿಯಲ್ಲಿ ನಮ್ಮ ಮತ್ತೊಂದು ದೃಢ ಮತ್ತು ಮಹತ್ವದ ಹೆಜ್ಜೆಯಾಗಿದೆ ಎಂದರು.
ಜಾತ್ರಾಟ್ ಗ್ರಾಮದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಗೌರವ ನಮನಗಳನ್ನು ಸಲ್ಲಿಸಿದರು. ನಂತರ ಗ್ರಾಮಕ್ಕೆ ಆಗಮಿಸಿದ ಸಂಸದೆಗೆ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಈ ವೇಳೆ ಬುಡಾ ಮಾಜಿ ಅಧ್ಯಕ್ಷ ಲಕ್ಷಣರಾವ ಚಿಂಗಳೆ ಸೇರಿದಂತೆ ಜಾತ್ರಾಟ್ ಹಾಗೂ ಲಖನಾಪುರ ಗ್ರಾಮದ ಹಿರಿಯ ಮುಖಂಡರು ಸೇರಿದಂತೆ ಇತರರು ಇದ್ದರು.




