ಬೆಳಗಾವಿ: ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.
ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಹಲ್ಲೆಗೊಳಗಾರಿವ ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ್ ಈ ಆರೋಪ ಮಾಡಿದ್ದಾರೆ.
ಮಾತುಕತೆಗೆಂದು ಮನೆಗೆ ಕರೆದು ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ನನ್ನ ತಲೆ ಒಡೆಯುವಂತೆ ಹೊಡೆದಿದ್ದು, ತಲೆಯಿಂದ ರಕ್ತ ಚಿಮ್ಮಿದೆ ಎಂದು ಕಣ್ಣಿರಿಟ್ಟಿದ್ದಾರೆ.
ಸರ್ಕಾರ ನನಗೆ ರಕ್ಷಣೆ ನೀಡಬೇಕು. ಇಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಳಲು ತೋಡಿಕೊಂಡಿದ್ದಾರೆ. ಗಂಭೀರವಾಗಿ ಹಲ್ಲೆಗೊಳಲಾಗಿರುವ ನಿಂಗಪ್ಪ ಕರೆಣ್ಣವರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.




