ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ 22 ನೇ ಚಿತ್ರಸಂತೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿದರು.
ದೇಶದ ವಿವಿಧ ಭಾಗಗಳಿಂದ 1,500 ಕಲಾವಿದರು ಇಂದು ನಡೆದ ಚಿತ್ರಸಂತೆಯಲ್ಲಿ ಭಾಗವಹಿಸಿ, ಕಲಾಕೃತಿಗಳನ್ನು ಪ್ರದರ್ಶಿಸಿದ್ದಾರೆ. ಕರ್ನಾಟಕದ ಜತೆಗೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಪಾಲ್ಗೊಂಡಿದ್ದು, ಕಲಾವಿದರ ಕುಂಚ ಅಥವಾ ಪೆನ್ಸಿಲ್‌ಗಳಿಂದ ರಚಿಸಿದ ಚಿತ್ರಳನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸಿದರು.
ಮೈಸೂರು ಮತ್ತು ತಂಜಾವೂರು ಶೈಲಿಯ ಪರಂಪರೆಯ ಚಿತ್ರಕಲೆ, ರಾಜಸ್ಥಾನಿ, ಮಧುಬನಿ ಶೈಲಿಯ ಕಲಾಕೃತಿಗಳು ಹಾಗೂ ಜಲವರ್ಣ, ತೈಲವರ್ಣ, ಅಕ್ರಿಲಿಕ್, ಪೆನ್ಸಿಲ್, ಮಷಿ ರೇಖಾಚಿತ್ರಗಳು, ಗ್ರಾಫಿಕ್ ಮಾಧ್ಯಮ ಕೃತಿಗಳು ಸೇರಿದಂತೆ ವಿವಿಧ ಪರಂಪರೆಯ ಆಧುನಿಕ ಮತ್ತು ಸಮಕಾಲೀನ ಶೈಲಿಯ ಕಲಾಕೃತಿಗಳು ಚಿತ್ರಸಂತೆಯಲ್ಲಿ ಸಾರ್ವಜನಿಕರ ಗಮನ ಸೆಳೆದವು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಸಿ. ವೇಣುಗೋಪಾಲ ಅವರು ಸಚಿವರ ಜೊತೆಗಿದ್ದರು.




