ಬೆಂಗಳೂರು : ಮನೆಗೆ ಬೆಂಕಿ ಬಿದ್ದು ಮಹಿಳಾ ಟೆಕ್ಕಿ ಮೃತಪಟ್ಟ ಘಟನೆ ಬೆಂಗಳೂರಿನ ಸುಬ್ರಮಣ್ಯ ಲೇಔಟ್ ನಲ್ಲಿ ನಡೆದಿದೆ. ಮನೆಗೆ ತಗುಲಿದ ಬೆಂಕಿಯಿಂದ ಮನೆಯ ವಸ್ತುಗಳು ಎಲ್ಲಾ ಸುಟ್ಟು ಕರಕಲಾಗಿದೆ. ಹಾಗೂ ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಮೃತಪಟ್ಟಿದ್ದಾರೆ.
ಜ.3 ರಂದು ಸುಬ್ರಮಣ್ಯ ಲೇಔಟ್ ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಕಿಯ ಹೊಗೆ ಕುಡಿದು ಉಸಿರುಗಟ್ಟಿ ಶರ್ಮಿಳಾ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮನೆಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮನೆ ಮಾಲೀಕರು ರಾಮಮೂರ್ತಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆ ಡೋರ್ ಒಡೆದು ಪೊಲೀಸರು ಒಳಗೆ ಹೋಗಿದ್ದರು . ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲೇ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗುತ್ತದೆ, ಆದರೆ ಅಷ್ಟರಲ್ಲೇ ಶರ್ಮಿಳಾ ಪ್ರಾಣಪಕ್ಷಿ ಹಾರಿಹೋಗಿತ್ತು.
ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಶರ್ಮಿಳಾ ಬೆಂಗಳೂರಿನ ಅಕ್ಸೆಂಚರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಧಾವಿಸಿ ಪರಿಶೀಲನೆ ನಡೆಸಿದೆ. ಬಾಡಿಗೆ ಮನೆಯಲ್ಲಿ ಅಂದು ಶರ್ಮಿಳಾ ಒಬ್ಬರೇ ಇದ್ದರು ಎನ್ನಲಾಗಿದೆ.




