ಬೆಂಗಳೂರು : ಬಾಗಲಕೋಟೆ ಜಿಲ್ಲಾ ಕೋರ್ಟ್ ಹಾಗೂ ಮೈಸೂರಿನ ಹಳೆ ಕೋರ್ಟ್ ಗೆ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಿಡಿಗೇಡಿಗಳು ಬಾಗಲಕೋಟೆ ಜಿಲ್ಲಾ ಕೋರ್ಟ್ ಹಾಗೂ ಮೈಸೂರಿನ ಹಳೆ ಕೋರ್ಟ್ ಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು, ಇದರಿಂದ ಆತಂಕಗೊಂಡ ಸಿಬ್ಬಂದಿಗಳು, ವಕೀಲರು ಕೋರ್ಟ್ ನಿಂದ ಹೊರಗೆ ಧಾವಿಸಿದ್ದಾರೆ .ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮೈಸೂರಿನ ಹಳೆ ಕೋರ್ಟ್ ಗೆ ಇ-ಮೇಲ್ ಸಂದೇಶದ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕೋರ್ಟ್ ನಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶ ಬಂದಿದೆ.. ಘಟನಾ ಸ್ಥಳಕ್ಕೆ ತೆರಳಿರುವ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿವೆ. ಕೋರ್ಟ್ ಆವರಣ, ಕೋರ್ಟ್ ಒಳಗಡೆಗೆ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.




