ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಭಾರೀ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ.ಬಾಯ್ಲರ್ ಸ್ಫೋಟದ ಪರಿಣಾಮವಾಗಿ ಇನ್ನೂ ಆರು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಅವರಲ್ಲಿ ಕೆಲವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಘಟನೆ ಸಂಬಂಧ ತನಿಖೆ ಮುಂದುವರಿದಿದೆ.
ಈ ದುರಂತವು ಕಾರ್ಮಿಕ ವಲಯದಲ್ಲಿ ಆತಂಕ ಮೂಡಿಸಿದ್ದು, ಕಾರ್ಖಾನೆಯ ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆಗಳು ಎದ್ದಿವೆ.




