ಬೆಂಗಳೂರು: ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಬಳಿ ನಡೆದಿದೆ.
ಚನ್ನಪಟ್ಟಣದ ಹೊಸೂರುದೊಡ್ಡಿ ಬಳಿ ಈ ಘಟನೆ ನಡೆದಿದೆ. ಶಾಲೆಯಿಂದ ಮಕ್ಕಳನ್ನು ಮನೆಗೆ ಬಿಡಲು ಕರೆದೊಯ್ಯುತ್ತಿದ್ದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಅಪಘಾತದಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಗಾಯಾಳು ವಿದ್ಯಾರ್ಥಿಗಳನ್ನು ಚನ್ನಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಬೆಂಗಳೂರು ಇಂಟರ್ ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




