ಮೈಸೂರು : ಮಾರ್ಚ್ ಮೊದಲ ವಾರ ರಾಜ್ಯ ಸರ್ಕಾರದ ಬಜೆಟ್ ( Budget 2026) ಮಂಡಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸಲಾಗುತ್ತದೆ.ಈ ಬಗ್ಗೆ ಶೀಘ್ರವೇ ಪ್ರಕಟ ಮಾಡುತ್ತೇವೆ. ಇದಕ್ಕೂ ಮುನ್ನ ಹಾಸನದಲ್ಲಿ ಸಾಧನಾ ಸಮಾವೇಶ ನಡೆಸುತ್ತೇವೆ ಎಂದರು.
ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಈ ಬಗ್ಗೆ ನಾನು ಮಾತನಾಡಬೇಕು ಅಥವಾ ಡಿಕೆ ಶಿವಕುಮಾರ್ ಮಾತನಾಡಬೇಕು. ಶಾಸಕರಿಗೇನು ಗೊತ್ತಿರುತ್ತದೆ.
ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ ನಾವು ಬದ್ಧ ಎಂದರು. ನಾಳೆ ವಿಶೇಷ ಕ್ಯಾಬಿನೆಟ್ ಸಭೆ ಕರೆದಿದ್ದೇನೆ. ಅಲ್ಲಿ ಚರ್ಚೆ ಮಾಡುತ್ತೇವೆ. ನಾನು ದೆಹಲಿಗೆ ಹೋಗುತ್ತಿಲ್ಲ ಎಂದರು.
ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಸಿಎಂ ಸಿದ್ದರಾಮಯ್ಯ ಪ್ರೀತಿಯಿಂದ ಬರಮಾಡಿಕೊಂಡು ಶುಭ ಹಾರೈಸಿದರು.ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.




