ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಸುದ್ದಿಯಾಗುತ್ತಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದ ಎಂಬ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಹೇಳಿಕೆ ಆಗಾಗ ಕೇಳಿಬರುತ್ತಲೇ ಇದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಿನ್ನೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು.
ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಭೇಟಿಯಾಗಿ 5 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ’ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ನ ಮರ್ಮವೇನು..? ಹೈಕಮಾಂಡ್ ಭೇಟಿ ವೇಳೆ ಏನಾದರೂ ಶುಭ ಸೂಚನೆ ಸಿಕ್ಕಿದ್ಯಾ ಎಂಬುದು ಸದ್ಯಕ್ಕಿರುವ ಕುತೂಹಲ.




