ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ಸುದ್ದಿ, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಂಕ್ರಾಂತಿ ಹಬ್ಬದ ದಿನವೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ರಾಜಕಾರಣಕ್ಕೆ ನಾನು ಮರಳುವುದಾಗಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ನಾನು ರಾಜ್ಯ ರಾಜಕಾರಣದಿಂದ ದೂರವಾಗಿಲ್ಲ. ರಾಜ್ಯ ರಾಜಕರಣದಲ್ಲಿಯೇ ಇದ್ದೇನೆ. ಎಂದೂ ರಾಜ್ಯ ರಾಜಕಾರಣದಿಂದ ದೂರ ಸರುಯುವುದಿಲ್ಲ. ನಾನು ಎಲ್ಲಿ ಇರಬೇಕು ಎಂಬುದನ್ನು ರಾಜ್ಯದ ಜನತೆ ತೀರ್ಮಾ ಮಾಡುತ್ತಾರೆ ಎಂದು ಹೇಳಿದ್ದಾರೆ.
ನಾವು ಮೈತ್ರಿ ಒಪ್ಪಂದ ಮಾಡಿಕೊಂಡಿದ್ದೇವೆ. ಈ ಮೈತ್ರಿಯಲ್ಲಿ ಗೊಂದಲಗಳಿಗೆ ಅವಕಾಶ ಕೊಡಬಾರದು. ನಮ್ಮ ಉದ್ದೇಶ ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಅಧಿಕಾರಕ್ಕೆ ಬಂದು ಜನರು ನೆಮ್ಮದಿಯಾಗಿರಬೇಕು ಎಂದರು.
ರಾಜ್ಯದಲ್ಲಿ ಯಾವ ರೀತಿ ಆಡಳಿತ ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇನೆ. ಒಳ್ಳೆ ಸರ್ಕಾರವನ್ನು ತಂದು ಜನರ ಬದುಕು ಹಸನಗೊಳಿಸಬೇಕು.
ಆ ನಿಟ್ಟಿನಲ್ಲಿ ನಾಡಿನ ಜನತೆ ನಾನು ಯಾವ ಸ್ಥಾನದಲ್ಲಿ ಇರಬೇಕು ಎಂಬುದನ್ನು ತೀರ್ಮಾನ ಮಾಡುತ್ತಾರೆ. ನಾನು ರಾಜ್ಯ ರಾಜಕೀಯದಿಂದ ಯಾವತ್ತೂ ದೂರ ಸರಿಯುವುದಿಲ್ಲ. ಕೇಂದ್ರ ಸರ್ಕಾರದಲ್ಲಿ ಪ್ರಧಾನಿಗಳು ನನಗೆ ಹುದ್ದೆ ಕೊಟ್ಟಿದ್ದಾರೆ.
ಆ ಎರಡು ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡಲು ಫೌಂಡೇಶನ್ ಹಾಕಿದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಎಂದು ತೀರ್ಮಾನ ಮಾಡುತ್ತೇನೆ. ಬಂದೇ ಬರುತ್ತೇನೆ ಎಂದು ತಿಳಿಸಿದ್ದಾರೆ.




