ಬಾಗಲಕೋಟೆ: ಸಂಕ್ರಾಂತಿ ಹಬ್ಬದ ದಿನದಂದೇ ಸ್ನಾನಕ್ಕೆ ಹೋಗಿದ್ದ ಇಬ್ಬರು ಬಾಲಕರು ಕಲ್ಲು ಕ್ವಾರಿಯಲ್ಲಿ ಮುಳುಗಿ ಸಾವನ್ನಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ತಂದೆಯ ಕಣ್ಣೆದುರೇ ಕ್ವಾರಿ ನೀರಿನಲ್ಲಿ ಮುಳುಗಿ ಮಕ್ಕಳಿಬ್ಬರೂ ಮೃತಪಟ್ಟಿದ್ದಾರೆ. ಮನೋಜ್ (17) ಹಾಗೂ ಒರಮೋದ್ (17) ಮೃತ ಬಾಲಕರು.ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಬಳಿ ಈ ಘಟನೆ ನಡೆದಿದೆ.
ಮನೋಜ್ ಹಾಗೂ ಪ್ರಮೋದ್ ಇಬ್ಬರೂ ಪ್ರಥಮ ಪಿಯುಸಿ ಓದುತ್ತಿದ್ದರು. ಕಾಲೇಜಿಗೆ ರಜೆ ಇದ್ದುದರಿಂದ ತೇರಿನ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಸ್ನಾನಕ್ಕೆಂದು ಕ್ವಾರಿ ನೀರಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿದ್ದಾರೆ.
ತಕ್ಷಣ ಇಬ್ಬರು ಬಾಲಕರನ್ನು ಸ್ಥಳೀಯರು ಮೇಲಕೆತ್ತಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಇಬ್ಬರೂ ಮೃತಪಟ್ಟಿದ್ದರೆಂದು ವೈದ್ಯರು ಘೋಷಿಸಿದ್ದಾರೆ.ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




