ಬೆಳಗಾವಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ-ಬಾಗಲಕೋಟೆ ರಸ್ತೆಯ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೊಪ್ಪಡ್ಲ ಗ್ರಾಮದ ಲಕ್ಕಣ್ಣ ಬಸಪ್ಪ ಮೃತ ದುರ್ದೈವಿ.
ದಿವ್ಯ ಎಂಬ ಯುವತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಮುರಗೋಡ ಬಳಿ ನಿಯಂತ್ರಣ ತಪ್ಪಿದ ಕಾರು ಬೈಕ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುರಗೋಡ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.




