ದಾವಣಗೆರೆ: ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಅಭಿಮಾನಿಗಳು, ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿಗೆ ಜೈ ಎಂದು ಘೋಷಣೆ ಕೂಗಿದ್ದಾರೆ.
ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಗೊಳಿ ಅವರು, ಜನ ಅಭಿಮಾನಕ್ಕಾಗಿ ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗುತ್ತಾರೆ. ಆದರೆ ಅದು ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.
ನಮ್ಮ ಮೇಲಿನ ಅಭಿಮಾನಕ್ಕೆ ಜನ ಆ ರೀತಿ ಘೋಷಣೆ ಕೂಗುತ್ತಾರೆ. ನಾನು ಮಾತ್ರ ಈಗ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಲ್ಲ. ಈಗ ಯಾರಾಗುತ್ತಾರೆ ಆಗಲಿ, ನಾನು ಮುಂದಿನ ಚುನಾವಣೆಯಲ್ಲಿ ಆಕಾಂಕ್ಷಿ ಎಂದು ಹೇಳಿದ್ದಾರೆ.
ಈಗ ಅಸ್ಸಾಂ ಚುನಾವಣೆ ಬಂದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಕೂಡ ಇದೆ. ಸಿಎಂ ಬದಲಾವಣೆಯ ಚರ್ಚೆಯನ್ನು ನಿಲ್ಲಿಸುವುದು ಸೂಕ್ತ. ಸಿಎಂ ಮತ್ತು ಡಿಸಿಎಂಗೆ ಹತ್ತಾರು ಕೆಲಸಗಳು ಇರುತ್ತವೆ. ಆಗಾಗ ದೆಹಲಿಗೆ ಹೋಗುತ್ತಾರೆ. ಏನೇ ಆದರೂ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.




