Ad imageAd image

 ನೂತನ ಸಿಪಿಐ ಶ್ರೀನಿವಾಸ್ ಎಂ ಅವರಿಗೆ ಸನ್ಮಾನ

Bharath Vaibhav
 ನೂತನ ಸಿಪಿಐ ಶ್ರೀನಿವಾಸ್ ಎಂ ಅವರಿಗೆ ಸನ್ಮಾನ
WhatsApp Group Join Now
Telegram Group Join Now

ಚೇಳೂರು : ತಾಲೂಕಿನ ನೂತನ ವೃತ್ತ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡ ಶ್ರೀನಿವಾಸ್ ಎಂ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.ಜಿಲ್ಲಾ ಸಂಚಾಲಕ ಕಡ್ಡಿಲು ವೆಂಕಟರವಣಪ್ಪ ನೇತೃತ್ವದಲ್ಲಿ ಪದಾಧಿಕಾರಿಗಳು ಸಿಪಿಐ ಅವರಿಗೆ ಶಾಲು ಹೊದಿಸಿ ಶುಭ ಕೋರಿದರು.

ಈ ವೇಳೆ ಮಾತನಾಡಿದ ಶ್ರೀನಿವಾಸ್ ಅವರು,ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದರು.

ಕಡ್ಡಿಲು ವೆಂಕಟರವಣಪ್ಪ ಮಾತನಾಡಿ, ಅಧಿಕಾರಿಗಳು ಜನಪರವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಡಿಎಸ್‌ಎಸ್ ತಾಲೂಕು ಅಧ್ಯಕ್ಷ ಮಂಜುನಾಥ ಪಿ ಮುಖಂಡರಾದ ಚಾಕವೇಲು ಅಂಜಿ, ಗಿನ್ನಿ ಶ್ರೀನಿವಾಸ್, ಪಾಳ್ಯಕೆರೆ ಬಾಬು, ನರಸಿಂಹಪ್ಪ, ಗೋಪಿ, ಕಿರಣ್ ಕುಮಾರ್, ಡಿ.ವಿ. ನಾರಾಯಣಸ್ವಾಮಿ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!