ಬೆಂಗಳೂರು: ಕಚೇರಿಯಲ್ಲೇ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ ಡಿಜಿಪಿ ಡಾ.ರಾಮಚಂದ್ರರಾವ್ ವೀಡಿಯೋ ವೈರಲ್ ಬೆನ್ನಲ್ಲೇ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿರುವುದಾಗಿ ತಿಳಿದು ಬಂದಿದೆ.
ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆಯಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಾಕಿಂಗ್ ಎನ್ನುವಂತೆ ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ತಮ್ಮ ಡಿಜಿಪಿ ಕಚೇರಿಯಲ್ಲೇ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ರಾಸಲೀಲೆ ಆಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.
ವೈರಲ್ ಆಗಿರುವಂತ ವೀಡಿಯೋಗಳಲ್ಲಿ ಡಿಜಿಪಿ ಡಾ.ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರೋದನ್ನು ಕಾಣಬಹುದಾಗಿದೆ. ಹೀಗೆ ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆಗೆ ಡಿಜಿಪಿ ಡಾ.ರಾಮಚಂದ್ರರಾವ್ ಸರಸ ಆಡುವಂತ ವೀಡಿಯೋ ಮಾಡಿಕೊಂಡಿದ್ದಾರೆ.
ಬೆನ್ನಲ್ಲೇ ಡಿಜಿಪಿ ಡಾ.ರಾಮಚಂದ್ರ ರಾವ್ ಅವರು, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಗೃಹ ಸಚಿವರನ್ನು ಡಿಜಿಪಿ ಡಾ.ರಾಮಚಂದ್ರರಾವ್ ಭೇಟಿಯಾಗಿದ್ದು ತೀವ್ರ ಕುತೂಹಲ ಕೆರಳಿಸಿದೆ.




