Ad imageAd image

ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಶೇ.50ರ ಮೀಸಲಾತಿಗೆ ಅಕ್ಷೇಪವಿಲ್ಲ : ಹೈಕೋರ್ಟ್

Bharath Vaibhav
ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಶೇ.50ರ ಮೀಸಲಾತಿಗೆ ಅಕ್ಷೇಪವಿಲ್ಲ : ಹೈಕೋರ್ಟ್
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಶೇ.50ರ ಮೀಸಲಾತಿಯಲ್ಲಿ ನೇಮಕಾತಿ ಮುಂದುವರಿಸಿ, ಆದೇಶಗಳನ್ನು ವಿತರಿಸಲು ಅವಕಾಶ ಕಲ್ಪಿಸಲು ಅನುಮತಿ ಕೋರಿ ಸೂಕ್ತ ಅರ್ಜಿ ಸಲ್ಲಿಸುವುದಕ್ಕೆ ಹೈಕೋರ್ಟ್ ಅವಕಾಶ ನೀಡಿದೆ.

ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಮೀಸಲಾತಿ ಪ್ರಮಾಣವನ್ನು ಶೇ.15ರಿಂದ 17 ಪರಿಶಿಷ್ಟ ಪಂಗಡದ ಪಂಗಡದ ಮೀಸಲಾತಿಯನ್ನು ಮೀಸಲ ಶೇ3 ರಿಂದ ಶೇ.7ರ ವರೆಗೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಕರ್ನಾಟಕ ಪ.ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022ರ ಜಾರಿಗೊಳಿಸಿತ್ತು.

ಈ ಕಾಯ್ದೆ ಸಂವಿಧಾನಬಾಹಿರವಾಗಿದೆ ಎಂದು ಆಕ್ಷೇಪಿಸಿ ಡಾ.ಅಂಬೇಡ್ಕರ್ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕೋರಿಗೆ ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾ.ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠ ಈ ಬಗ್ಗೆ ವಿಚಾರಣೆ ನಡೆಸಿದೆ

ಸರ್ಕಾರದ ಪರ ಅಡ್ವಕೇಟ್ ಜನರಲ್ ಅವರು, ಶೇ.56ರ ಮೀಸಲು ಆಧರಿಸಿ ಹಲವು ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಆದರೆ, ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿ ನೀಡುವಂತಿಲ್ಲ ಎಂದು 2025ರ ನ.27ರಂದು ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಹಾಗಾಗಿ, ಹಾಲಿ ಅರ್ಜಿಗಳನ್ನು ನ್ಯಾಯಾಲಯ ನಿರ್ಧರಿಸುವವರೆಗೆ ಹೆಚ್ಚುವರಿ ಶೇ.6 ಮೀಸಲಾತಿ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ನ್ಯಾಯಪೀಠ ಸರ್ಕಾರ ಈ ಕುರಿತು ಸೂಕ್ತ ಅರ್ಜಿ ಸಲ್ಲಿಸಿದರೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದು, ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!