Ad imageAd image

ಬೆಳಗಾವಿ ಗಡಿ ವಿವಾದ : ಇಂದು ಸುಪ್ರೀಂ ಕೋರ್ಟ್ ನಲ್ಲಿ ಮಹಾರಾಷ್ಟ್ರ ಅರ್ಜಿ ವಿಚಾರಣೆ

Bharath Vaibhav
ಬೆಳಗಾವಿ ಗಡಿ ವಿವಾದ : ಇಂದು ಸುಪ್ರೀಂ ಕೋರ್ಟ್ ನಲ್ಲಿ ಮಹಾರಾಷ್ಟ್ರ ಅರ್ಜಿ ವಿಚಾರಣೆ
supreme court of india
WhatsApp Group Join Now
Telegram Group Join Now

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ 22 ವರ್ಷಗಳ ಹಿಂದೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬುಧವಾರ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.

ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರ, ಪಟ್ಟಣ, ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ಮಹಾರಾಷ್ಟ್ರ ಸರ್ಕಾರದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಬೇಕೆ ಎನ್ನುವ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ನಿರ್ಣಯ ಹೊರಬೀಳುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ನ್ಯಾಯವಾದಿ ನಿಶಾಂತ್ ಪಾಟೀಲ್ ವಕಾಲತ್ತು ವಹಿಸಿದ್ದಾರೆ.

2004ರಲ್ಲಿ ಮಹಾರಾಷ್ಟ್ರ ಸುಪ್ರೀಂ ಕೋರ್ಟ್ ಗೆ ಗಡಿ ವಿವಾದ ಬಗ್ಗೆ ಅರ್ಜಿ ಸಲ್ಲಿಸಿದೆ. ಇದಕ್ಕೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಒಂದು ವೇಳೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದರೆ ಎರಡು ರಾಜ್ಯಗಳ ವಾದ, ಪ್ರತಿವಾದಕ್ಕೆ ಚಾಲನೆ ಸಿಗಲಿದೆ.

ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರ, ಪಟ್ಟಣ, ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ಮಹಾರಾಷ್ಟ್ರ ಸರ್ಕಾರದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಬೇಕೆ ಎನ್ನುವ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ನಿರ್ಣಯ ಹೊರಬೀಳುವ ಸಾಧ್ಯತೆ ಇದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!