ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಎರಡು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆಂಧ್ರ ಮೂಲದ ಸಣ್ಣ ಯಲ್ಲಪ್ಪ(45), ಹರಿ(25), ರಂಗನಾಥ(12) ಬಸವರಾಜ್(40) ಹಾಗೂ ಟಾಟಾ ಏಸ್ ವಾಹನದ ಚಾಲಕ ಮೃತಪಟ್ಟಿದ್ದಾರೆ.
ಬೊಲೆರೊ ಪಿಕಪ್ ವಾಹನ, ಟಾಟಾ ಏಸ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಬೊಲೆರೊ ಪಿಕಪ್ ವಾಹನ, ಟಾಟಾ ಏಸ್ ವಾಹನಗಳಲ್ಲಿ ಕುರಿಗಳನ್ನು ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು.
ಒಂದರ ಹಿಂದೆ ಒಂದರಂತೆ ಸಿಂಧನೂರಿನಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ವಾಹನಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕೆಲವು ಕುರಿಗಳು ಮೃತಪಟ್ಟಿವೆ. ಸಿಂಧನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.




