ಹುಮನಾಬಾದ : ಗ್ರಾಮ ಪಂಚಾಯತಿಗಳಿಗೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಹೋರಡಿಸಿರುವ ಸರಕಾರದ ಆದೇಶ ಈ ಕೂಡಲೇ ಹಿಂಪಡೆಯಬೇಕು ಎಂದು ಧೂಮ್ಮನಸೂರ್ ಗ್ರಾಮ ಪಂಚಾಯತ ಅಧ್ಯಕ್ಷ ವೀರಪ್ಪ ಧೂಮ್ಮನಸೂರ್ ಆಗ್ರಹಿಸಿದ್ದಾರೆ.
ಹುಮನಾಬಾದ ಪಟ್ಟಣದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು,ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ. ಆದರೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೆ ಅಧಿಕಾರಿಗಳಿಗೆ ಆಡಳಿತ ನಡೆಸುವ ಅವಕಾಶ ನೀಡುವುದು ಪ್ರಜಾಪ್ರಭುತ್ವ ವಿರೋಧವಾಗಿದೆ ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯತಿಗಳ ಈಗಿರುವ ಆಡಳಿತ ಸಮಿತಿಯ ಅವಧಿ ವಿಸ್ತರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಕೂಡ ಬರೆಯಲಾಗುತ್ತದೆ.
ಸರ್ಕಾರವು ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿ ಕಾರಿಗಳನ್ನು ನೇಮಿಸುವ ಪ್ರಜಾಪ್ರಭುತ್ವ ವಿರೋಧಿ ಆದೇಶ ಹಿಂಪಡೆದು ಕಾಯ್ದೆಯ ಅನ್ವಯ ಆಡಳಿತಾವಧಿ ಕೊನೆಗೊಳ್ಳುತ್ತಿರುವ ಈಗಿರುವ ಆಡಳಿತ ಸಮಿತಿಗೆ ಮುಂದಿನ ಚುನಾವಣೆವರೆಗೆ ಪುನರ್ ನೇಮಕ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ವರದಿ : ಸಜೀಶ್ ಲಂಬುನೋರ್




