ಅರಸೀಕೆರೆ : ಮಾಡಾಳು ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿ ನಡೆದ ಜನಸಂಪರ್ಕ ಸಭೆ,ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ, ಕಂದಾಯ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಹಾಗೂ ಎಲ್ಲಾ ಇಲಾಖೆಗಳಿಂದ ಬಾಕಿ ಉಳಿದಿರುವ ಹತ್ತು ಹಲವು ಸಮಸ್ಯೆಗಳ ಪರಿಹಾರ ಕಾರ್ಯಕ್ರಮಗಳು ಕರ್ನಾಟಕ ಗೃಹ ಮಂಡಳಿಯ ಮಾನ್ಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನೆರವೇರಿತು.

ಈ ಸಭೆಯಲ್ಲಿ ಸುಮಾರು ಅರ್ಜಿಗಳು ಸ್ವೀಕಾರವಾಗಿದ್ದು ಇದರಲ್ಲಿ ಸ್ಥಳದಲ್ಲೇ ಸುಮಾರು ಅರ್ಜಿಗಳ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹಾರ ಮಾಡಲಾಯಿತು.
ಈ ಸಭೆಯಲ್ಲಿ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಕುಮಾರ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿ ನಾಗೇಂದ್ರ,ಅರಸೀಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ಗಂಗಣ್ಣನವರ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರುಗಳು, ಮುಖಂಡರುಗಳು, ಸಾರ್ವಜನಿಕರು,ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ : ರಾಜು




