ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕುಂಚೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುವ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಬೊಲೆರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿಗೆ ಸಣ್ಣಪುಟ್ಟ ಹಾನಿಯಾಗಿದ್ದು, ಕಾರಿನಲ್ಲಿದ್ದ ಸಂಸದ ರಾಘವೇಂದ್ರ ಹಾಗೂ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




