ಜಾರ್ಖಂಡ್ : ಜಾರ್ಖಂಡ್’ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಎನ್ಕೌಂಟರ್ ನಡೆದ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.ಈ ಪ್ರದೇಶದಲ್ಲಿ ಮಾವೋವಾದಿಗಳಿಗಾಗಿ ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಾರ್ಖಂಡ್’ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ದಟ್ಟವಾದ ಸಾರಂಡಾ ಕಾಡಿನಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಕೋಬ್ರಾ, ಜಾರ್ಖಂಡ್ ಜಾಗ್ವಾರ್ ಮತ್ತು ಜಿಲ್ಲಾ ಪೊಲೀಸರ ಜಂಟಿ ತಂಡ ನಡೆಸಿದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಛೋಟಾನಾಗ್ರಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಮಾವೋವಾದಿಗಳಲ್ಲಿ ಸಾವುನೋವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಎನ್ಕೌಂಟರ್ ನಂತರ, ದಂಗೆಕೋರರು ಅರಣ್ಯ ಮತ್ತು ಗುಡ್ಡಗಾಡು ಪ್ರದೇಶಕ್ಕೆ ಪಲಾಯನಗೈದರು, ಆದರೆ ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.




