ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ. ಜಮಖಂಡಿ ಹಾಲಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿಗೆ ಶಾಕ್ ಎನ್ನುವಂತೆ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬಾಗಲಕೋಟೆಯ ಜಮಖಂಡಿಯಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ.ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ 50ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮೂಲ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ಕಾರ್ಯಕರ್ತರು ಸಿಡಿದೆದ್ದು ಈ ನಿರ್ಧಾರ ಕೈಗೊಂಡಿದ್ದಾರೆ.ಉಮೇಶ್ ಅಲಮೇಲಕರ್, ಗದಿಗೆಪ್ಪ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.
ಜಮಖಂಡಿ ನಗರದ ರಮಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ಧವೇ ಘೋಷಣೆಯನ್ನು ಕೂಡ ಕೂಗಲಾಗಿದೆ.




