ಬೇಡಕಿಹಾಳದ ಬಿ.ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ 77ನೇ ಗಣರಾಜ್ಯೋತ್ಸವ ಮಕ್ಕಳಿಂದ ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮ.
ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದ ಬಿ.ಎಸ್.ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಕುಸುಮಾವತಿ ಮಿರಜಿ ಮಹಾ ವಿದ್ಯಾಲಯದಲ್ಲಿ ಸಂಭ್ರಮದಿಂದ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ.ಬಾಬಾಸಾಹೇಬ ಭೋಜಕರ್ ಹಾಗೂ ಕುಸುಮಾವತಿ ಕಾಲೇಜಿನಲ್ಲಿ ಡಾ.ವಿಪುಲ್ ಸದಲಗೆ ಧ್ವಜಾರೋಹಣ ನೆರವೇರಿಸಿದರು. ತಾತ್ಯಾಸಾಹೇಬ ಖೋತ ಮತ್ತು ಇಂದ್ರಜಿತ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಗಣರಾಜ್ಯೋತ್ಸವದ ಪ್ರಾರಂಭದಲ್ಲಿ ಎನ್.ಸಿ.ಸಿ ವಿದ್ಯಾರ್ಥಿಗಳಿಂದ ಮುಖ್ಯ ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.

ಪ್ರಾಚಾರ್ಯ ಎಂ ಎಸ್ ಕಟ್ಟಿ ಸ್ವಾಗತ ಪ್ರಾಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ, ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಲಠ್ಠೆ ಶಿಕ್ಷಣ ಸಂಸ್ಥೆಯ ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷ ಸದಸ್ಯರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ:ಮಹಾವೀರ ಚಿಂಚಣೆ




