Ad imageAd image

ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು ಇಡುತ್ತೇವೆ : ಡಿಕೆ ಶಿವಕುಮಾರ್ ಘೋಷಣೆ

Bharath Vaibhav
ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು ಇಡುತ್ತೇವೆ : ಡಿಕೆ ಶಿವಕುಮಾರ್ ಘೋಷಣೆ
DKS
WhatsApp Group Join Now
Telegram Group Join Now

ಬೆಂಗಳೂರು : ಮನ್‌ರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು ಇಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸುತ್ತಿದ್ದು, ಪಂಚಾಯಿತಿಗಳ ಅಧಿಕಾರವನ್ನು ಕಸಿದುಕೊಂಡು, ಉದ್ಯೋಗದ ಹಕ್ಕನ್ನು ಬಡವರಿಂದ ಕಿತ್ತುಕೊಳ್ಳುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದರು.

ಮನ್‌ರೇಗಾ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಈ ವಿಚಾರವಾಗಿ ರಾಜಭವನಕ್ಕೆ ತೆರಳುತ್ತೇವೆ.

ಅಗತ್ಯವಿದ್ದರೆ ಬಂಧನಕ್ಕೂ ಸಿದ್ಧವಾಗಿದ್ದೇವೆ ಎಂದು ಹೇಳಿದರು. ರಾಜ್ಯಪಾಲರು ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಅವರು ಆಗ್ರಹಿಸಿದರು.

ಬಡವರು, ದಲಿತರು ಮತ್ತು ರೈತರ ಪರ ನಿಜವಾಗಿ ಹೋರಾಟ ಮಾಡುವ ಪಕ್ಷ ಕಾಂಗ್ರೆಸ್ ಮಾತ್ರ. ಬಡವರ ಕಾರ್ಯಕ್ರಮಗಳನ್ನು ಬಿಜೆಪಿಯವರು ರದ್ದು ಮಾಡಿದ್ದು, ಇದಕ್ಕೆ ಆರ್‌ಎಸ್‌ಎಸ್ ಮಾರ್ಗದರ್ಶನ ನೀಡುತ್ತಿದೆ ಎಂದು ಸಿಎಂ ಆರೋಪಿಸಿದರು.

ಮನ್​ರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಲೋಕಭವನದಲ್ಲಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!