ಕೊಪ್ಪಳ : ರಾಜ್ಯದಲ್ಲಿ ಯುವಜನತೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಕೊಕನೂರು ತಾಲೂಕಿನ ರ್ಯಾವಣಕಿ ಗ್ರಾಮದಲ್ಲಿ ಹೃದಯಾಘಾತದಿಂದ 18 ವರ್ಷದ ಯುವತಿ ಬಲಿಯಾದ ಘಟನೆ ನಡೆದಿದೆ.
ಕಾವ್ಯಾ ಚಲವಾದಿ (18) ಕಳೆದ 2 ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಂಗಳವಾರ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.




