ಮುಂಬೈ : ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಮಹಾರಾಷ್ಟ್ರ DCM ಅಜಿತ್ ಪವಾರ್ ಇದ್ದರು ಎಂದು ವರದಿಯಾಗಿದೆ.ಅಜಿತ್ ಪವಾರ್ ಭದ್ರತಾ ಅಧಿಕಾರಿ, ಓರ್ವ ಸಹಾಯಕ, ಇಬ್ಬರು ಪೈಲಟ್ ಗಳು, ಓರ್ವ ಕ್ಯಾಬಿನ್ ಕ್ರ್ಯೂ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.
ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




