ನವದೆಹಲಿ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ವರದಿಯಾಗಿದೆ.
ಈಶಾನ್ಯ ದೆಹಲಿಯ ಭಜನ್ಪುರ ಪ್ರದೇಶದಲ್ಲಿ ಜನವರಿ 18ರಂದು ಆರು ವರ್ಷದ ಬಾಲಕಿಯ ಮೇಲೆ 10, 13 ಮತ್ತು 14 ವರ್ಷದ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ .
ಅಧಿಕಾರಿಗಳ ಪ್ರಕಾರ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ಮತ್ತು ಆತನ ಕುಟುಂಬ ನಾಪತ್ತೆಯಾಗಿದೆ. ಈ ಮಧ್ಯೆ, ತನ್ನ ಪೋಷಕರು ಮತ್ತು ಮೂವರು ಒಡಹುಟ್ಟಿದವರೊಂದಿಗೆ ವಾಸಿಸುತ್ತಿರುವ ಸಂತ್ರಸ್ತ ಬಾಲಕಿಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ತಿಳಿದುಬಂದಿದೆ




