ಅಥಣಿ: ಅಭಿವೃದ್ಧಿಯ ಹೆಸರಿನಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸೇರಿ ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಘಟನೆ ಕಾಗವಾಡ ವಿಧಾನಸಭಾ ಕ್ಷೇತ್ರದ ಮೊಳೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಸೊಂದಕರ ತೋಟದ ರಸ್ತೆ ನಿರ್ಮಾಣದ ಹೆಸರಿನಲ್ಲಿ ನರೇಗಾ ಯೋಜನೆಯಡಿ ಸುಮಾರು 5.24 ಲಕ್ಷ ರೂಪಾಯಿ ಹಣವನ್ನು ಯಾವುದೇ ಕೆಲಸ ಮಾಡದೆಯೇ ಡ್ರಾ ಮಾಡಲಾಗಿದೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಪಡೆದ ಸ್ಥಳೀಯರು, ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸಹ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸುಳ್ಳು ವರದಿ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ.
ವರದಿ: ಪ್ರಲ್ಹಾದ ವಾಘಮೋರೆ




