ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು.ಈ ವೇಳೆ ಏಪ್ರಿಲ್ 1 ರಿಂದ ನೂತನ ಐಟಿ ಕಾಯ್ದೆ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.
ವಿದೇಶಿ ವಿನಿಮಯ ಕಾನೂನು ಪರಿಷ್ಕರಣೆಯ ನಿರ್ಧಾರದಿಂದ ವಿದೇಶಿ ಹೂಡಿಕೆದಾರರಿಗೆ ಅನುಕೂಲವಾಗಲಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಆಗಲಿದೆ ಇದರಿಂದ ವಿದೇಶಿ ಹೂಡಿಕೆದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮಹಿಳಾ ಉದ್ಯಮಿಗಳಿಗೆ ಕೇಂದ್ರ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ.
ಆಯುರ್ವೇದದ ಪ್ರಾಡಕ್ಟ್ ರಫ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಮೂರು ಆಯುರ್ವೇದ ಸಂಸ್ಥೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಪೂರ್ವದ ರಾಜ್ಯಗಳಲ್ಲಿ ಆಯುರ್ವೇದ ಸಂಸ್ಥೆ ಮಾಡಲಾಗುತ್ತಿದ್ದು 5 ವೈದ್ಯಕೀಯ ಕೇಂದ್ರ ಸ್ಥಾಪನೆಗೆ ಬಜೆಟ್ ನಲ್ಲಿ ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು ಇದರಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಅನುಕೂಲ ಆಗಲಿದೆ ಹಾಗಾಗಿ ಆಯುರ್ವೇದ ಕೇಂದ್ರಗಳನ್ನು ಸ್ಥಾಪನೆಗೆ ಬಜೆಟ್ ನಲ್ಲಿ ಅನುದಾನ ಘೋಷಿಸಲಾಯಿತು .




