Ad imageAd image

ಕ್ರಿಶ್ಚಿಯನ್ ಸಾಂಪ್ರದಾಯದಂತೆ ಸಿ. ಜೆ ರಾಯ್ ಅಂತ್ಯಕ್ರಿಯೆ

Bharath Vaibhav
ಕ್ರಿಶ್ಚಿಯನ್ ಸಾಂಪ್ರದಾಯದಂತೆ ಸಿ. ಜೆ ರಾಯ್ ಅಂತ್ಯಕ್ರಿಯೆ
WhatsApp Group Join Now
Telegram Group Join Now

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿ.ಜೆ.ರಾಯ್ ಅವರ ಪಾರ್ಥಿವ ಶರೀರವನ್ನು ಬೌರಿಂಗ್ ಆಸ್ಪತ್ರೆಯಿಂದ ಪತ್ನಿ ಹಾಗೂ ಮಕ್ಕಳಿಗೆ ಹಸ್ತಾಂತರ ಮಾಡಲಾಗಿದ್ದು, ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ಇಂದು ಕ್ರಿಶ್ಚಿಯನ್ ಸಾಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

ಆಸ್ಪತ್ರೆ ಬಳಿ ರಾಯ್ ಪತ್ನಿ‌ ಮತ್ತು ಮಕ್ಕಳ ಆಕ್ರಂದನ‌ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್​ನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರು‌ ಜನವರಿ 30ರಂದು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಶೋಕನಗರ ಠಾಣಾ ವ್ಯಾಪ್ತಿಯ ಲ್ಯಾಂಗ್ ಫೋರ್ಡ್ ಟೌನ್‌ನಲ್ಲಿರುವ ತಮ್ಮದೇ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿ.ಜೆ.ರಾಯ್, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದರು. ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಘಟನೆ ನಡೆದಿತ್ತು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!