ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಪುಟ್ಬಾಕ್ ಗ್ರಾಮದಲ್ಲಿ ವಾಟ್ಸಾಪ್ ಸ್ಟೇಟಸ್ ವಿಚಾರಕ್ಕೆ ತಾಯಿ, ಮಗನ ಮೇಲೆ ಹಲ್ಲೆ ನಡೆಸಲಾಗಿದೆ.
ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ ರೀತಿಯಲ್ಲಿ ಸ್ಟೇಟಸ್ ಹಾಕಿದ ಆರೋಪ ಕೇಳಿ ಬಂದಿದ್ದು, ಇದೇ ಕಾರಣಕ್ಕೆ ಮನೆಗೆ ಹೋಗಿ ಸ್ಟೇಟಸ್ ಹಾಕಿದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ.
ಮಗನನ್ನು ಹೊಡೆದಿದ್ದನ್ನು ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆಯೂ ಹಲ್ಲೆ ನಡೆಸಲಾಗಿದೆ. ಶಿವ ಮಾಲಾಧಾರಿಗಳ ಕಾರ್ಯಕ್ರಮಕ್ಕೆ ಕೇಸರಿ ಧ್ವಜ ಹಾಕಲಾಗಿದ್ದು, ಇದೇ ದೃಶ್ಯಗಳನ್ನು ಎಡಿಟ್ ಮಾಡಿ ಯುವಕ ಸ್ಟೇಟಸ್ ಹಾಕಿದ್ದ. ಈ ಹಿನ್ನೆಲೆ ಅನ್ಯಕೋಮಿನವರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ.
ಹಲ್ಲೆ ಖಂಡಿಸಿ ಗ್ರಾಮಸ್ಥರು ಮತ್ತು ಶಿವ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಕೈಯಲ್ಲಿ ಶಿವ ಪಾರ್ವತಿ ಮತ್ತು ಅಂಬೇಡ್ಕರ್ ಭಾವಚಿತ್ರ ಹಿಡಿದು ಧರಣಿ ನಡೆಸಿದ್ದಾರೆ. ಮುನ್ನೆಚ್ಚರಿಕೆಯಿಂದ ಸ್ಥಳದಲ್ಲಿ ಗುರುಮಠಕಲ್ ಠಾಣೆ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.




