Ad imageAd image

ನಾನು ರಾಜೀನಾಮೆ ಕೊಡುವ ಪ್ರಶ್ನೆಯೂ ಇಲ್ಲ : ಆರ್. ಬಿ ತಿಮ್ಮಾಪುರ

Bharath Vaibhav
ನಾನು ರಾಜೀನಾಮೆ ಕೊಡುವ ಪ್ರಶ್ನೆಯೂ ಇಲ್ಲ : ಆರ್. ಬಿ ತಿಮ್ಮಾಪುರ
WhatsApp Group Join Now
Telegram Group Join Now

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಆರ್.ಅಶೋಕ್ ನೇತೃತ್ವದಲ್ಲಿ ವಿಧಾನಸಭೆಯಲ್ಲಿಯೇ ಅಹೋರಾತ್ರಿ ಧರಣಿ ನಡೆಸಿದ್ದಾರೆ. ವಿಪಕ್ಷಗಳ ಪ್ರತಿಭಟನೆಗೆ ಸಚಿವ ಆರ್.ಬಿ.ತಿಮ್ಮಾಪುರ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಬಿ.ತಿಮ್ಮಾಪುರ, ಅಬಕಾರಿ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೂ ಇಲ್ಲ ಎಂದು ತಿಳಿಸಿದ್ದಾರೆ.

ವಿಪಕ್ಷದವರು ರಾಜಕೀಯಕ್ಕಾಗಿ ಧರಣಿ ನಡೆಸಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್ ಯಾರ ಮಾತನ್ನು ಕೇಳಿ ಆರೋಪ ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ.

ವಿರೋಧ ಪಕ್ಷದವರಿಗೆ ರಾತ್ರಿ ಯಾಕೆ ನಿದ್ದೆ ಬರುತ್ತಿಲ್ಲ ನನಗೆ ಗೊತ್ತಿಲ್ಲ. ಅವರು ವಿರೋಧ ಪಕ್ಷದವರು. ಅವರು ರಾಜಕಾರಣ ಮಾಡಲಿ. ಆದರೆ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿರುವ ವಿಪಕ್ಷ ನಾಯಕರು, ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಮಗನ ವಿರುದ್ಧವೂ ಲಂಚದ ಆರೋಪ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅಬಕಾರಿ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಿ, ಜಾಗಟೆ, ತಮ್ಮಟೆ ಬಾರಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!