Ad imageAd image

ಬೆಳಗಾವಿಯಲ್ಲಿ ಚಲಿಸುತ್ತಿದ್ದ ಲಾರಿ ಏರಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ

Bharath Vaibhav
ಬೆಳಗಾವಿಯಲ್ಲಿ ಚಲಿಸುತ್ತಿದ್ದ ಲಾರಿ ಏರಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ
WhatsApp Group Join Now
Telegram Group Join Now

ಬೆಳಗಾವಿ : ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ನಡೆದಿದೆ.

ರುಕ್ಮಿಣಿ ನಗರದ ನಿವಾಸಿ ಅಯಾಜ್ ಸವಣೂರ(36) ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಎಂಟು ಜನರಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ.

ಮೂಲಗಳ ಪ್ರಕಾರ ಹಿಂಡಲಗಾ ಬಳಿ ನಡೆದ ಅಪಘಾತವೇ ಘಟನೆಗೆ ಕಾರಣ ಎನ್ನಲಾಗಿದೆ. ಆ್ಯಕ್ಸಿಡೆಂಟ್ ಮಾಡಿ ಲಾರಿ ನಿಲ್ಲಿಸದೇ ಬಂದ ಕಾರಣ, ಬೆನ್ನುಹತ್ತಿ ಬಂದು ಚಾಲಕನ ಮೇಲೆ ನಡೆಸಿರುವ ಮಾಹಿತಿ ಇದೆ.

ಲಾರಿ ಚಾಲಕ ಅಯಾಜ್ ಸವಣೂರ ತೊಡೆ, ಕಿವಿ, ಬೆನ್ನು ಮತ್ತು ತಲೆ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಮನಬಂತೆ ಇರಿದಿದ್ದು, ಲಾರಿ ಮೇಲೂ ಕಲ್ಲು ತೂರಾಟ ನಡೆಸಿ, ಗಾಜು ಒಡೆದು ಅಟ್ಟಹಾಸ ಮೆರೆದಿದ್ದಾರೆ.

ಗಂಭೀರ ಗಾಯಗೊಂಡ ಅಯಾಜ್​​ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಘಟನಾ ಸ್ಥಳಕ್ಕೆ ಬೆಳಗಾವಿ ಪೊಲೀಸರ ತಂಡ ಮತ್ತು ಸೋಕೋ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!