Ad imageAd image

ಸ್ನೇಹಿತನ ಜೊತೆ ಸೇರಿ ಬರೋಬ್ಬರಿ 49 ಕೋಟಿ ರೂ. ಲಾಟರಿ ಗೆದ್ದ ಉಡುಪಿ ಮೂಲದ ಯುವಕ 

Bharath Vaibhav
ಸ್ನೇಹಿತನ ಜೊತೆ ಸೇರಿ ಬರೋಬ್ಬರಿ 49 ಕೋಟಿ ರೂ. ಲಾಟರಿ ಗೆದ್ದ ಉಡುಪಿ ಮೂಲದ ಯುವಕ 
WhatsApp Group Join Now
Telegram Group Join Now

ಉಡುಪಿ : ಯಾರಿಗೆ ಯಾವಾಗ ಅದೃಷ್ಟ ಖುಲಾಯಿಸುತ್ತೆ ಅಂತ ಹೇಳೋಕಾಗಲ್ಲ. ಇದೀಗ ದುಬೈನ ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾ‌ರ್ ಎಂಬ ಯುವಕ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ (20 ಮಿಲಿಯನ್ ದಿರಮ್) ರೂ.ಮೊತ್ತದ ಲಾಟರಿ ಗೆದ್ದಿದ್ದಾರೆ.

ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಮಸ್ಕತ್‌ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದಾರೆ. ಜ.20 ರಂದು ಬಿಗ್ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು.

ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು.

ಹೀಗಾಗಿ ಅದರಲ್ಲಿ ಅರ್ಧ ಹಣ ಅಂದರೆ ಸರಿ ಸುಮಾರು 24.5 ಕೋಟಿ ರು. ಹಣ ಅವರ ಗೆಳೆಯನಿಗೆ ಸಿಗಲಿದೆ. ಡ್ರಾ ಫಲಿತಾಂಶ ನೇರ ಪ್ರಸಾರವಾಗಿದ್ದು, ಕಾರ್ಯಕ್ರಮ ಆಯೋಜಕರೊಂದಿಗೆ ಶಾಂತನು ಸಂತಸ ವ್ಯಕ್ತಪಡಿಸಿದ್ದಾರೆ.

2021ರಿಂದಲೂ ಬಿಗ್ ಟಿಕೆಟ್ ರಾಫಲ್‌ಗಳಲ್ಲಿ ಭಾಗವಹಿಸುತ್ತಿದ್ದೆ. ಈ ಗೆಲುವು ತುಂಬಾ ಅನಿರೀಕ್ಷಿತವಾಗಿತ್ತು. ನನಗೆ ಸಿಕ್ಕಿರುವುದಕ್ಕೆ ತುಂಬಾ ಖುಷಿಯಾಗಿದ್ದು, ನಂಬಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!