ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾವಿರ ದಿನ ಪೂರೈಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13 ರಂದು ಹಾವೇರಿಯಲ್ಲಿ ಆಯೋಜಿಸಿದ್ದ ಹಕ್ಕುಪತ್ರ ವಿತರಣಾ ಸಮಾವೇಶವನ್ನು ಫೆಬ್ರವರಿ 14ಕ್ಕೆ ಮುಂದೂಡಲಾಗಿದೆ.ಸರ್ಕಾರದ ಸಾಧನಾ ಸಮಾವೇಶವನ್ನು ಫೆಬ್ರವರಿ 13 ರಂದು ನಡೆಸಲು ಯೋಜಿಸಲಾಗಿತ್ತು.
ಅದೇ ದಿನ ಬೆಂಗಳೂರಿನಲ್ಲಿ ವರ್ಲ್ಡ್ ಡ್ಯಾಮ್ ಸೇಫ್ಟಿ ಡಿವಿಷನ್ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಉದ್ಘಾಟಿಸಲಿದ್ದಾರೆ. ಹೀಗಾಗಿ ಸಾಧನಾ ಸಮಾವೇಶವನ್ನು ಒಂದು ದಿನ ಮುಂದೂಡಲಾಗಿದೆ.
ಫೆಬ್ರವರಿ 14ರಂದು ಬೆಳಗ್ಗೆ 11 ಗಂಟೆಗೆ ಸಾಧನಾ ಸಮಾವೇಶ ನಡೆಯಲಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ದಾಖಲೆ ರಹಿತರಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮವನ್ನು ಸರ್ಕಾರ ಮಾಡಿದೆ.
ಕಂದಾಯ ಇಲಾಖೆಯಿಂದ ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸಮಾವೇಶ ಆಯೋಜಿಸಲಾಗಿದ್ದು, 9 ಜಿಲ್ಲೆಗಳ ಒಟ್ಟು ಒಂದು ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.




