Ad imageAd image

ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ : ಭದ್ರತಾ ವೈಫಲ್ಯ 

Bharath Vaibhav
ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ : ಭದ್ರತಾ ವೈಫಲ್ಯ 
WhatsApp Group Join Now
Telegram Group Join Now

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವುಂಟಾಗಿದ್ದು, ಸಿಎಂ ಇಳಿಯಬೇಕಿದ್ದ ಹೆಲಿಪ್ಯಾಡ್ ಬದಲಾಗಿ ಸಚಿವ ಸತೀಶ್ ಜಾರಕಿಹೊಳಿ ಇಳಿಯಬೇಲಿದ್ದ ಹೆಲಿಪ್ಯಾಡ್ ನಲ್ಲಿ ಸಿಎಂ ಹೆಲಿಪಾಕ್ಟರ್ ಲ್ಯಾಂಡಿಗ್ ಆಗಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಲಬುರಗಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಾಯಚೂರು ರಸ್ತೆಯಲ್ಲಿ ಲ್ಯಾಂಡ್ ಆಗಬೇಕಿದ್ದ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್, ಕಲಬುರಗಿ ರಸ್ತೆಯಲ್ಲಿ ಲ್ಯಾಂಡ್ ಆಗಿದೆ.

ಸಚಿವ ಸತೀಶ್ ಜಾರಕಿಹೊಳಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿದ್ದ ಸ್ಥಳದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ.

ಅಲ್ಲದೇ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿದ್ದ ಹೆಲಿಪ್ಯಾಡ್ ನಲ್ಲಿ ಇಳಿದಿದ್ದಾರೆ. ಇದು ಗೊಂದಲಕ್ಕೆ ಕಾರಣವಾಗಿದೆ.

ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರನ್ನು ರಿಸೀವ್ ಮಾಡಿಕೊಳ್ಳಲು ಓಬ್ಬನೇ ಒಬ್ಬ ಅಧಿಕಾರಿ ಮಾತ್ರ ಇದ್ದರು ಎಂದು ತಿಳಿದುಬಂದಿದೆ. ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ವೈಫಲ್ಯವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!