Ad imageAd image

ಹಿರಿಯ ಪತ್ರಕರ್ತ, ಮಾಜಿ ಸದಸ್ಯ ಪಿ.ರಾಮಯ್ಯ ನಿಧನ : ಸಿಎಂ ಸಂತಾಪ 

Bharath Vaibhav
ಹಿರಿಯ ಪತ್ರಕರ್ತ, ಮಾಜಿ ಸದಸ್ಯ ಪಿ.ರಾಮಯ್ಯ ನಿಧನ : ಸಿಎಂ ಸಂತಾಪ 
WhatsApp Group Join Now
Telegram Group Join Now

ಬೆಂಗಳೂರು : ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ.’ದಿ ಹಿಂದೂ’ ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು.

ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದ ರಾಮಯ್ಯ ಅವರಲ್ಲಿದ್ದ ರಾಜಕೀಯ, ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ವಿದ್ಯಮಾನಗಳ ಜ್ಞಾನ-ಅನುಭವ ಬೆರಗುಗೊಳಿಸುತಿತ್ತು.

ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿ ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲು ಶ್ರಮಿಸಿದ್ದರು.ರಾಮಯ್ಯ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದ ಸದಸ್ಯರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!