ಬೆಂಗಳೂರು: ಕೆಎಂಎಫ್ ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆಯಾಗಿದ್ದಾರೆ. ಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಬಮೂಲ್ ಕುಟುಂಬಕ್ಕೆ ಸುಧಾರಾಣಿ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.
ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಸುಧಾರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ. ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ ಹಾಗೂ ಶುದ್ಧ ಮತ್ತು ಗುಣಮಟ್ಟದ ಪೌಷ್ಟಿಕ ಆಹಾರದೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ತಿಳಿಸಿದ್ದಾರೆ.




