ಥೈಲ್ಯಾಂಡ್’ನ ಸಾಂಗ್ಖ್ಲಾ ಪ್ರಾಂತ್ಯದ ಶಾಲೆಯ ಮೇಲೆ ಬಂದೂಕುಧಾರಿಯೊಬ್ಬ ದಾಳಿ ನಡೆಸಿ 22 ಮಕ್ಕಳು ಸೇರಿದಂತೆ 34 ಜನರನ್ನು ಕೊಂದಿದ್ದಾನೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, 18 ವರ್ಷದ ಯುವಕನೊಬ್ಬ M-4 ಬಂದೂಕಿನಿಂದ ಗುಂಡು ಹಾರಿಸಿದ್ದಾನೆ.
ಪ್ರತ್ಯಕ್ಷದರ್ಶಿಗಳು ಹೇಳುವಂತೆ ಆ ವ್ಯಕ್ತಿಯ ಸಹೋದರಿ ಅದೇ ಶಾಲೆಯಲ್ಲಿ ಓದುತ್ತಿದ್ದಳು. ಬಂದೂಕನ್ನು ಹಿಡಿದಿದ್ದ ಆ ವ್ಯಕ್ತಿ ಕೆಲವು ದಿನಗಳ ಹಿಂದೆ ತನ್ನ ಸಹೋದರಿಯ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದ ಶಿಕ್ಷಕನನ್ನ ಹುಡುಕುತ್ತಿದ್ದ. ಪೊಲೀಸರು ಈಗ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಶಾಲೆಯನ್ನು ಸೀಲ್ ಮಾಡಲಾಗಿದೆ ಮತ್ತು ಆ ಪ್ರದೇಶದಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಗುಂಡಿನ ದಾಳಿಯ ನಂತರ ದಾಳಿಕೋರ ಹಲವಾರು ಮಕ್ಕಳು ಮತ್ತು ಶಿಕ್ಷಕರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದ. ಶಾಲೆಯೊಳಗೆ ಇನ್ನೂ ಹಲವಾರು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ವಿಶೇಷ ಪಡೆಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದವು.
ಪೊಲೀಸರು ಇಡೀ ಶಾಲೆಯನ್ನು ಸುತ್ತುವರೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ದಾಳಿಕೋರನ ಗುರುತು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ




