Ad imageAd image

ಹೆತ್ತ ತಂದೆ, ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಮಗ

Bharath Vaibhav
ಹೆತ್ತ ತಂದೆ, ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಮಗ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್ಮೆಂಟ್ ನಲ್ಲಿ ಮಗನೇ ತನ್ನ ಹೆತ್ತ ತಂದೆ, ತಾಯಿಯ ಬರ್ಬರ ಹತ್ಯೆ ಮಾಡಿದ್ದಾನೆ.

ರೋಹನ್ ಭಟ್(33) ಎಂಬಾತ 4 ಲಕ್ಷ ರೂ. ಹಣಕ್ಕಾಗಿ ತನ್ನ ತಂದೆ-ತಾಯಿಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಆಗಿದ್ದಾರೆ. ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದಾರೆ.

ನಿನ್ನೆ ಬೆಳಗ್ಗೆ 7.30ರ ಸುಮಾರಿಗೆ ಹೆತ್ತ ತಂದೆ ಮತ್ತು ತಾಯಿಗೆ ಪುತ್ರ ಚಾಕುವಿನಿಂದ ಇರಿದಿದ್ದಾನೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದಾರೆ. ಆರೋಪಿ ಪುತ್ರ ರೋಹನ್ ಭಟ್ ನನ್ನು HAL ಪೊಲೀಸರು ಬಂಧಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿದೇಶದಲ್ಲಿರುವ ಮಗಳು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಹೆಚ್.ಎ.ಎಲ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!