ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ, ಕೆಆರ್ ಪುರಂ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್‌ರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಪೊಲೀಸರು ಬಂಧಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದರು ಎನ್ನಲಾದ ಬೈರತಿ ಬಸವರಾಜ್ ಅವರು ಇಂದು ಅಹಮದಾಬಾದ್‌ನಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದರು. ಅವರು ವಿಮಾನ ನಿಲ್ದಾಣಕ್ಕೆ ಬರುತ್ತಿರುವ ಖಚಿತ ಮಾಹಿತಿ ಪಡೆದಿದ್ದ ಸಿಐಡಿ (CID) ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಬಲೆ ಬೀಸಿದ್ದರು.
ಸಿಐಡಿ ಅಧಿಕಾರಿಗಳಿಗೆ ನೇರವಾಗಿ ಒಳಗೆ ಹೋಗಲು ತಾಂತ್ರಿಕ ಅಡಚಣೆ ಇತ್ತು. ಹೀಗಾಗಿ, ದೇವನಹಳ್ಳಿ ಎಸಿಪಿ ಹರ್ಷ ಅವರು ಕಾರ್ಯಾಚರಣೆಯ ನೇತೃತ್ವ ವಹಿಸಿದರು. ಎಸಿಪಿ ಹರ್ಷ ಅವರು ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿ ಬೈರತಿ ಬಸವರಾಜ್ ಅನ್ನು ವಶಕ್ಕೆ ಪಡೆದಿದ್ದಾರೆ.




