ಹಾಸನ : ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಮಹಿಳೆಯ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದೆ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿಯಾಗಿರುವ ಪ್ರಿಯಾಂಕ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.
ಮದುವೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಿಯಾಂಕ ಚಿಕ್ಕಮಂಗಳೂರಿಗೆ ಬಂದಿದ್ದರು. ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರು ಪೊಲೀಸರು ಸ್ಪಂದಿಸುತ್ತಿಲ್ಲ ಎಂದು ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಇದೀಗ ಅರೆಹಳ್ಳಿ ಹಾಗೂ ಬೇಲೂರು ಠಾಣೆ ಪೊಲೀಸರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಹೊರಟಿರುವ ಜನರಿಗೆ ಪ್ರಿಯಾಂಕಾ ಆಧಾರ್ ಕಾರ್ಡ್ ಸಿಗುತ್ತದೆ. ಅವರು ತಕ್ಷಣ ಆಧಾರ್ ಕಾರ್ಡನಲ್ಲಿದ್ದ ನಂಬರ್ ಗೆ ಕರೆ ಮಾಡುತ್ತಾರೆ ಅದು ಅವರ ಪತಿಗೆ ಹೋಗುತ್ತದೆ.
ನಿಮ್ಮ ಪತ್ನಿ ಆಧಾರ್ ಕಾರ್ಡ್ ನಮಗೆ ಸಿಕ್ಕಿದೆ ಎಂದು ಮಾಹಿತಿ ನೀಡುತ್ತಾರೆ. ತಕ್ಷಣ ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಅವರ ವಸ್ತುಗಳು ಸಿಗುತ್ತವೆ. ಆದರೆ ಅವರು ನಾಪತ್ತೆಯಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 373 ಸಮೀಪ ಇರುವ ಕೆರೆಯ ಬಳಿ ಚಪ್ಪಲಿ, ಬಟ್ಟೆ, ವ್ಯಾನಿಟಿ ಬ್ಯಾಗ್ ಹಾಗೂ ಎಲ್ಲವೂ ಪತ್ತೆಯಾಗಿದೆ. ಹಾಗಾಗಿ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಿಯಾಂಕಳನ್ನ ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಗುರುವಾರ ಬಂದಂತಹ ಮಹಿಳೆ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ.
ಕುಟುಂಬಸ್ಥರ ಮಾಹಿತಿ ಪ್ರಕಾರ ಸುಮಾರು 25 ರಿಂದ 30 ಲಕ್ಷ ಮೌಲ್ಯದ ಒಡವೆ ಆಕೆಯ ಮೇಲೆ ಇತ್ತು ಹಾಗಾಗಿ ಆಕೆಯನ್ನು ಅದಕ್ಕೋಸ್ಕರ ಯಾರಾದರೂ ಕೊಲೆ ಮಾಡಿರಬಹುದು ಎನ್ನುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಆಕೆ ಏನಾದರೂ ಮೃತಪಟ್ಟಿದರೆ, ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.




