Ad imageAd image

ಬಿಹಾರದ 25 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ 10 ಸಾವಿರ ಜಮೆ ಮಾಡಿದ ನಿತೀಶ್ ಕುಮಾರ್

Bharath Vaibhav
ಬಿಹಾರದ 25 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ 10 ಸಾವಿರ ಜಮೆ ಮಾಡಿದ ನಿತೀಶ್ ಕುಮಾರ್
WhatsApp Group Join Now
Telegram Group Join Now

ಪಾಟ್ನಾ: ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ ಅಡಿಯಲ್ಲಿ ಬಿಹಾರದ ನಿತೀಶ್ ಕುಮಾರ್ ಸರ್ಕಾರವು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ₹10 ಸಾವಿರ ಜಮೆ ಮಾಡಲಾಗಿದೆ.

ಮಹಿಳಾ ಸಬಲೀಕರಣ ಹಾಗೂ ಸ್ವ-ಉದ್ಯೋಗಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಯನ್ನು ಜಾರಿಗೊಳಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್‌ನಲ್ಲಿ ಯೋಜನೆಗೆ ಚಾಲನೆ ನೀಡಿದ್ದರು.

ಇದುವರೆಗೂ ರಾಜ್ಯದ 1.81 ಕೋಟಿ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಅವರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಲಾಗಿದೆ. ಇದಕ್ಕಾಗಿ ₹2500 ಕೋಟಿ ವೆಚ್ಚಮಾಡಲಾಗಿದೆ.

ಇದನ್ನು ಸದ್ಭಳಕೆ ಮಾಡಿಕೊಂಡ ಮಹಿಳಾ ಉದ್ಯಮಿಗಳಿಗೆ, ಅವರ ಉದ್ಯಮವನ್ನು ವಿಸ್ತರಿಸಲು ₹2 ಲಕ್ಷ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಅಡಿಯಲ್ಲಿ ಉದ್ಯಮಗಳನ್ನು ಸ್ಥಾಪಿಸಿರುವ ಮಹಿಳೆಯರಿಗೆ ₹2 ಲಕ್ಷದವರೆಗೆ ಹಣಕಾಸು ನೆರವು ಒದಗಿಸುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!