ಗೋಕಾಕ್ : ಇಲ್ಲಿನ ಕೋರ್ಟ್ ಸರ್ಕಲ್ ಬಳಿ ಕಾರಿನಲ್ಲಿ ಅಕ್ರಮವಾಗಿ ರಿವಾಲ್ವರ್ ಇಟ್ಟುಕೊಂಡು ಸಂಚರಿಸುತ್ತಿದ್ದ ಬಾಗಲಕೋಟೆ ಮೂಲದ ವ್ಯಕ್ತಿಯನ್ನು ಗೋಕಾಕ್ ಶಹರ ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ನಿವಾಸಿ ರಮೇಶ್ ಕೇಸರಗೊಪ್ಪ ಚೌವಾಣ (52) ಬಂಧಿತ ಆರೋಪಿ. ಈತ ತನ್ನ ಕಾರಿನ ಡ್ಯಾಶ್ಬೋರ್ಡ್ನಲ್ಲಿ ರಿವಾಲ್ವರ್ ಇಟ್ಟುಕೊಂಡು ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದರು. ಈ ವೇಳೆ ಲೈಸನ್ಸ್ ಇದ್ದರೂ ಅದು ಬಾಗಲಕೋಟೆ ಜಿಲ್ಲೆಗೆ ಮಾತ್ರ ಸೀಮಿತವಾಗಿರುವುದು ಕಂಡುಬಂದಿದೆ.

ನಿಯಮ ಉಲ್ಲಂಘನೆ: ರಿವಾಲ್ವರ್ ಪರವಾನಗಿ ಅವಧಿ ಮುಗಿದಿದ್ದರೂ ಅದನ್ನು ನವೀಕರಿಸಿರಲಿಲ್ಲ. ಅವಧಿ ಮುಗಿದ ಶಸ್ತ್ರಾಸ್ತ್ರವನ್ನು ಪೊಲೀಸ್ ಠಾಣೆಗೆ ಜಮಾ ಮಾಡದೆ ನಿಯಮ ಉಲ್ಲಂಘಿಸಲಾಗಿದೆ. ಮತ್ತೊಂದು ಜಿಲ್ಲೆಯ ವ್ಯಾಪ್ತಿಗೆ ಅನುಮತಿ ಇಲ್ಲದೆ ಆಯುಧವನ್ನು ತರಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ (Arms Act) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ : ಮಹಾಂತೇಶ್ ಎಸ್ ಹುಲಿಕಟ್ಟಿ




