Ad imageAd image

ನಾಳೆ ರಾಜ್ಯ ಸಾರಿಗೆ ನೌಕರರು ‘ಬೆಂಗಳೂರು ಚಲೋ’ : ಮುಷ್ಕರದಲ್ಲಿ ಖಡಕ್ ಎಚ್ಚರಿಕೆ 

Bharath Vaibhav
ನಾಳೆ ರಾಜ್ಯ ಸಾರಿಗೆ ನೌಕರರು ‘ಬೆಂಗಳೂರು ಚಲೋ’ : ಮುಷ್ಕರದಲ್ಲಿ ಖಡಕ್ ಎಚ್ಚರಿಕೆ 
ksrtc
WhatsApp Group Join Now
Telegram Group Join Now

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 19ರಂದು ನಾಳೆ ಕರ್ನಾಟಕ ರಾಜ್ಯ ಸಾರಿಗೆ ನೌಕರರು ‘ಬೆಂಗಳೂರು ಚಲೋ’ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಸೂಚನೆ ನೀಡಿದ್ದಾರೆ.

ಸಾರಿಗೆ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದು, ಕರ್ತವ್ಯಕ್ಕೆ ಗೈರಾದಲ್ಲಿ ವೇತನ ಕಡಿತ ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಗೈರಾಗುವ ನೌಕರರ ಪಟ್ಟಿಯನ್ನು ಘಟಕವಾರು ಸಿದ್ಧಪಡಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೋ ವರ್ಕ್, ನೋ ಪೇ ಎಂಬ ತತ್ವದಡಿ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದಾರೆ.

01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ 01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗ್ರಹಿಸಿದ್ದಾರೆ.

ಈ ಹಿಂದೆ ಮುಷ್ಕರ ನಡೆಸಿದ್ದಾಗ ಮನವೊಲಿಸಿದ್ದ ಸರ್ಕಾರ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಈವರೆಗೂ ಬೇಡಿಕೆ ಈಡೇರಿಸಿಲ್ಲ. ಇದರಿಂದ ನೊಂದ ನೌಕರರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!