ಸಿಂಧನೂರು: ಉರ್ದು ಸಮೂಹ ಸಂಪನ್ಮೂಲ ಕೇಂದ್ರಗಳು ಎಫ್ಎಲ್ಎನ್, ಅಡಿಯಲ್ಲಿ ಕಲಿಕಾ ಹಬ್ಬವನ್ನು ಆಯೋಜಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಶೈಕ್ಷಣಿಕ ಬಲವರ್ಧನೆಗೆ ಉತ್ತೇಜನ ನೀಡುತ್ತಿದೆ ಈ ಹಬ್ಬವು ರಸಪ್ರಶ್ನೆ ಪೋಸ್ಟರ್ ಪ್ರದರ್ಶನ ಮತ್ತು ಸಾಂಸ್ಕೃತಿಕ ಬೆಳವಣಿಗೆಗಳ ಮೂಲಕ ಮಕ್ಕಳ ಸಕ್ರಿಯ ಕಲಿಕೆಯನ್ನು ಪ್ರೋತ್ಸಾಹಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಹೇಳಿದರು.
ನಗರದ ಟಿಪ್ಪು ಸುಲ್ತಾನ್ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ್,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ,ಉರ್ದು ಸಮೂಹ ಸಂಪನ್ಮೂಲ ಕೇಂದ್ರ ವತಿಯಿಂದ ಕಲಿಕಾ ಹಬ್ಬವನ್ನು ಆಯೋಜನೆ ಮಾಡಲಾಗಿತ್ತು, ಆರ್.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಜೆಡಿಎಸ್ ಮುಖಂಡ ಅಭಿಷೇಕ್ ನಾಡಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರವು ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಅದರಲ್ಲಿ ಕಲಿಕಾ ಹಬ್ಬವು ಪ್ರಮುಖವಾಗಿದೆ. ಶಿಕ್ಷಕರು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರ ವನ್ನು ಕಲಿಸಿ ಕೊಡಬೇಕು, ಸಂಸ್ಕಾರ ಪಡೆಯದೆ ಇರುವ ವ್ಯಕ್ತಿ ಶಿಕ್ಷಣ ಪಡೆದರೂ ಯಾವುದೇ ಪ್ರಯೋಜನವಿಲ್ಲ ರಾಜ್ಯದಲ್ಲಿ ಸುಮಾರು ಶಾಲೆಗಳು ಮುಚ್ಚಲಾಗಿದೆ ಇದು ಅತ್ಯಂತ ಕಳವಳ ಸಂಗತಿ ಸರ್ಕಾರಿ ಶಾಲೆ ಉಳಿಸಿ ಬೆಳೆಸುವುದಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.

ಈ ವೇಳೆ ಸುಡಾ ಸದಸ್ಯ ಖಾಜಾ ಮಲ್ಲಿಕ್, ಎಸ್ ಡಿ ಎಂ ಸಿ ಅಧ್ಯಕ್ಷ ಮಹಿಬೂಬ್ ಎಂ ಆರ್, ಹುಲಗಪ್ಪ ಇ.ಸಿ.ಓ, ಬಸವರಾಜ ಆನೆಗುಂದ, ಅಜೀಜ್,ಅಬಿದ್, ನೂರಖಾನ್, ಮೈನುದ್ದೀನ್, ನಾಗಪ್ಪ, ಶಾಲೆಯ ಮುಖ್ಯ ಗುರುಗಳಾದ ಜಾಕಿರ್ ಅಲಿ, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷರಾದ ಮಾನಮ್ಮ, ಸೇರಿದಂತೆ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ:ಬಸವರಾಜ ಬುಕ್ಕನಹಟ್ಟಿ




