ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸ್ಸಾಂ ಪ್ರವಾಸದಲ್ಲಿದ್ದಾರೆ. ಅವರು ಗುರುವಾರ ಅವರು ಗುವಾಹಟಿಯ ನೀಲಾಚಲ ಬೆಟ್ಟದಲ್ಲಿರುವ ಪವಿತ್ರ ಶಕ್ತಿಪೀಠವಾದ ಕಾಮಾಕ್ಯ ದೇವಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.ಅಸ್ಸಾಂನ ಗುವಾಹಟಿಯ ನೀಲಾಚಲ ಬೆಟ್ಟದಲ್ಲಿರುವ ಪವಿತ್ರ ಶಕ್ತಿಪೀಠವಾದ ಕಾಮಾಕ್ಯ ದೇವಿ ದೇವಾಲಯಕ್ಕೆ ಭೇಟಿ ನೀಡಲಾಯಿತು ಎಂದು ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ದೇವಿಯ ದಿವ್ಯಾನುಗ್ರಹ ಪಡೆದು ನಾಡಿನ ಸಮಸ್ತ ಜನರ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಪ್ರಿಯಾಂಕಾ ಗಾಂಧಿ ಅವರು ಸಹ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.




