ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ 6 ನಿರ್ಣಯಗಳನ್ನು ಮಂಡಿಸಲಾಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ 6 ನಿರ್ಣಯಗಳನ್ನು ಮಂಡಿಸಲಾಯಿತು. ಸರ್ಕಾರದ ವೈಫಲ್ಯ, ಎಸ್ ಸಿ ಎಸ್ ಪಿ-ಟಿಎಸ್ ಪಿ ಅನುದಾನ ದುರ್ಬಳಕೆ, ಅಬಕಾರಿ ಹಗರಣ, ಒಳಮೀಸಲಾತಿ ವರ್ಗೀಕರಣದಲ್ಲಿ ಅನ್ಯಾಯ, ಎ ಖಾತಾ ಮತ್ತು ಬಿ ಖಾತಾ ಮೂಲಕ ಭ್ರಷ್ಟಾಚಾರ, ಕಸದ ಅವ್ಯವಹಾರಗಳ ಬಗ್ಗೆ ನಿರ್ಣಯ ಮಂಡಿಸಲಾಯಿತು.
ಇನ್ನು ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಅಮೋಹನ್ ದಾಸ್ ಅಗರ್ವಾಲ್, ಬಿ.ವೈ.ವಿಜಯೇಂದ್ರ ನೇತೃತ್ವದ ತಂಡ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಿ ಬಹುಮತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಆರ್.ಅಶೋಕ್ ಹಾಗೂ ಛಲವಾದಿ ನಾಅರಾಯಣಸ್ವಾಮಿ ಭ್ರಷ್ಟ ಸರ್ಕಾರವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸದನದ ಒಳಗೆ ಹಾಗೂ ಹೊರಗೆ ಈ ಮೂವರ ತಂಡ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಈ ಸಂಘರ್ಷ ನಿರಂತರವಾಗಿರಲಿ.ಮುಂಬರುವ ವಿಧಾನಸಭಾ ಉಪಚುನಾವಣೆಗಳು, ವಿಧಾನಪರಿಷತ್, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗೆಲ್ಲಬೇಕು. ಇದಕ್ಕೆ ಸಂಘಟಿತ ಪ್ರಯತ್ನ ಇರಬೇಕು ಎಂದು ಸಲಹೆ ನೀಡಿದರು.




