Ad imageAd image

ಬಾಗಲಕೋಟೆಯಲ್ಲಿ ವೇಳೆ ಕಲ್ಲು ತೂರಾಟ ಕೇಸ್ : ಖಡಕ್ ಕ್ರಮಕ್ಕೆ ಸಿಎಂ ಸೂಚನೆ 

Bharath Vaibhav
ಬಾಗಲಕೋಟೆಯಲ್ಲಿ ವೇಳೆ ಕಲ್ಲು ತೂರಾಟ ಕೇಸ್ : ಖಡಕ್ ಕ್ರಮಕ್ಕೆ ಸಿಎಂ ಸೂಚನೆ 
WhatsApp Group Join Now
Telegram Group Join Now

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದೆ. ಎಸ್‌ಪಿ ಸಿದ್ದಾರ್ಥ್ ಅವರ ಮೇಲೆ ಸಹ ಕಲ್ಲು ತೂರಾಟ ನಡೆಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ಘಟನೆ ಕುರಿತು ಇಬ್ಬರನ್ನು ಬಂಧಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಮತ್ತೆ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಪ್ರತಿಕ್ರಿಯೆ: ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ’ ಎಂದು ಹೇಳಿದ್ದಾರೆ.

‘ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ.

‘ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ’ ಎಂದು ಭರವಸೆ ಕೊಟ್ಟಿದ್ದಾರೆ.

‘ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ’ ಎಂದು ತಿಳಿಸಿದ್ದಾರೆ.

ಅಂಗಡಿಗಳು ಬಂದ್: ಶುಕ್ರವಾರ ಮಧ್ಯಾಹ್ನದ ಕಲ್ಲು ತೂರಾಟ ಪ್ರಕರಣದ ಬಳಿಕ ಬಾಗಲಕೋಟೆ ನಗರದ ಹಲವು ಕಡೆ ಜನರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚುತ್ತಿದ್ದಾರೆ.

ಎಸ್‌ಪಿ ಸಿದ್ದಾರ್ಥ್ ಲಾಠಿ ಹಿಡಿದು ಪರಿಸ್ಥಿತಿ ಹತೋಟಿಗೆ ತರುತ್ತಿದ್ದಾರೆ. ಕಲ್ಲು ತೂರಾಟ ಮಾಡುವವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಹಣ್ಣಿನ ಅಂಗಡಿ, ತರಕಾರಿ ಅಂಗಡಿಗಳನ್ನು ಬಂದ್ ಮಾಡಿಕೊಂಡು ಜನರು ಮನೆಗಳತ್ತ ತೆರಳುತ್ತಿದ್ದಾರೆ.

.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!